Exodus 38:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪವಿತ್ರಸ್ಥಳಕ್ಕಾಗಿ ಎರಡು ಟನ್‌ಗಿಂತ ಹೆಚ್ಚು ಬಂಗಾರವು ಯೆಹೋವನಿಗೆ ಕಾಣಿಕೆಯಾಗಿ ಕೊಡಲ್ಪಟ್ಟಿತು. (ಅಧಿಕೃತ ಅಳತೆಯನ್ನು ಉಪಯೋಗಿಸಿ ಇದನ್ನು ತೂಕ ಮಾಡಲಾಯಿತು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಮಂದಿರದ ಸಕಲವಿಧವಾದ ಕೆಲಸಗಳಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್.
Kannada BSI Bible 2016
ಪರಿಶುದ್ಧಾಲಯ ನಿಯಮದ ಮೇರೆಗೆ ಪರಿಶುದ್ಧ ಕೆಲಸಕ್ಕೆ ಉಪಯೋಗಿಸಿದ ಎಲ್ಲಾ ಬಂಗಾರವು ಕಾಣಿಕೆಯ ಬಂಗಾರವನ್ನೊಳಗೊಂಡು ಒಟ್ಟು ಇಪ್ಪ ತ್ತೊಂಭತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲುಗಳಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವ ಮಂದಿರದ ಸಕಲವಿಧವಾದ ಕೆಲಸದಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಇಪ್ಪತ್ತೊಂಭತ್ತು ತಲಾಂತು ಏಳು ನೂರಮೂವತ್ತು ಶೆಕೆಲ್.
Kannada Bible (KNCL) BSI 2016
ದೇವಮಂದಿರದ ವಿವಿಧ ಕೆಲಸದಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರದ ತೂಕ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಸುಮಾರು ಒಂದು ಸಾವಿರ ಕಿಲೋಗ್ರಾಂ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರಿಶುದ್ಧಾಲಯದ ಸೇವೆಗೆ ನೇಮಕವಾದ ಪರಿಶುದ್ಧ ಕೆಲಸಕ್ಕೆ ಉಪಯೋಗಿಸಿದ ಎಲ್ಲಾ ಬಂಗಾರವು ವಿಶೇಷವಾಗಿ ಅರ್ಪಿಸಿದ ಕಾಣಿಕೆಯಾಗಿತ್ತು, ಅದು ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್ ಇತ್ತು.