Exodus 38:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ತಾಮ್ರವನ್ನು ದೇವದರ್ಶನಗುಡಾರದ ಬಾಗಿಲಿನ ಗದ್ದಿಗೇಕಲ್ಲುಗಳನ್ನು ಮಾಡಲು ಉಪಯೋಗಿಸಲಾಯಿತು. ಯಜ್ಞವೇದಿಕೆಯನ್ನು ಮತ್ತು ತಾಮ್ರದ ಜಾಳಿಗೆಯನ್ನು ಮಾಡಲು ಅವರು ತಾಮ್ರವನ್ನು ಉಪಯೋಗಿಸಿದರು. ಯಜ್ಞವೇದಿಕೆಯ ಎಲ್ಲಾ ಉಪಕರಣಗಳನ್ನು ಮತ್ತು ಬಟ್ಟಲುಗಳನ್ನು ಮಾಡಲು ತಾಮ್ರವನ್ನು ಉಪಯೋಗಿಸಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳಿಂದ ದೇವದರ್ಶನದ ಗುಡಾರದ ಬಾಗಿಲಿನ ಮೆಟ್ಟುವಕಲ್ಲುಗಳನ್ನು, ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಯಜ್ಞವೇದಿಯ ಎಲ್ಲಾ ಉಪಕರಣಗಳನ್ನು,
Kannada BSI Bible 2016
ಆ ಹಿತ್ತಾಳೆಯಿಂದ ಅವನು ಸಭಾಗುಡಾರದ ದ್ವಾರಗಳಿಗೆ ಕುಣಿಕೆಗಳನ್ನೂ ಬಲಿ ಪೀಠವನ್ನೂ ಅದಕ್ಕೆ ಜಾಲರಿಯನ್ನೂ ಬಲಿಪೀಠದ ಸಮಸ್ತ ಪ್ರಾತ್ರೆಗಳನ್ನೂ ಮಾಡಿದನು.ಸುತ್ತಲಿನ ಅಂಗಳದ ಕುಣಿಕೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರಿಂದ ದೇವದರ್ಶನದ ಗುಡಾರದ ಬಾಗಲಿನ ಗದ್ದಿಗೇಕಲ್ಲುಗಳನ್ನೂ ತಾಮ್ರದ ಯಜ್ಞವೇದಿಯನ್ನೂ ಅದರ ತಾಮ್ರದ ಜಾಳಿಗೆಯನ್ನೂ
Kannada Bible (KNCL) BSI 2016
ಇದರಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಗದ್ದಿಗೇಕಲ್ಲುಗಳನ್ನು, ತಾಮ್ರದ ಬಲಿಪೀಠವನ್ನು, ಅದರ ತಾಮ್ರದ ಜಾಳಿಗೆಯನ್ನು, ಬಲಿಪೀಠದ ಎಲ್ಲ ಉಪಕರಣಗಳನ್ನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಂಚಿನಿಂದ ಅವರು ದೇವದರ್ಶನದ ಗುಡಾರದ ದ್ವಾರಗಳಿಗೆ ಗದ್ದಿಗೇ ಕಲ್ಲುಗಳನ್ನೂ ಬಲಿಪೀಠವನ್ನೂ ಅದಕ್ಕೆ ಕಂಚಿನ ಜಾಳಿಗೆಯನ್ನೂ ಬಲಿಪೀಠದ ಸಮಸ್ತ ಪಾತ್ರೆಗಳನ್ನೂ ಮಾಡಿದರು.