Exodus 38:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವನು ವೇದಿಕೆಗೆ ತಾಮ್ರದ ಜಾಳಿಗೆಯನ್ನು ಮಾಡಿದನು. ಜಾಳಿಗೆಯು ಹೆಣಿಗೇ ಕೆಲಸದಿಂದ ಮಾಡಲಾಗಿತ್ತು. ಜಾಳಿಗೆಯು ವೇದಿಕೆಯ ಕೆಳಭಾಗದಲ್ಲಿರುವ ಕಟ್ಟೆಯ ಕೆಳಗೆ ಇಡಲ್ಪಟ್ಟಿತ್ತು. ಅದು ಕೆಳಗಿನಿಂದ ವೇದಿಕೆಯ ಅರ್ಧಭಾಗದಷ್ಟು ಮೇಲಕ್ಕೆ ಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಿದನು. ಅದು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರುವಂತೆ ಹಾಕಿದನು.
Kannada BSI Bible 2016
ಬಲಿಪೀಠದ ಕೆಳಗಿನ ಆವರಣದಲ್ಲಿ ನೆಲದಿಂದ ಪೀಠದ ಮಧ್ಯದ ವರೆಗೆ ಬರುವಂತೆ ಜಾಲರೀ ಕೆಲಸದಿಂದ ಹಿತ್ತಾಳೆಯ ಬೆಂಕಿಗೂಡನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ವೇದಿಗೆ ಹೆಣಿಗೇ ಕೆಲಸದಿಂದ ತಾಮ್ರದ ಜಾಳಿಗೆಯನ್ನು ಮಾಡಿದನು. ಅದು ವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ವೇದಿಯ ಬುಡದಿಂದ ನಡುವಿನ ತನಕ ಇರುವಂತೆ ಹಾಕಿದನು.
Kannada Bible (KNCL) BSI 2016
ಪೀಠದ ಹೆಣಿಗೇ ಕೆಲಸದಿಂದ ತಾಮ್ರದ ಜಾಳಿಗೆಯನ್ನು ಮಾಡಿದನು. ಅದು ಪೀಠದ ಸುತ್ತಲಿರುವ ಕಟ್ಟೆಯ ಕೆಳಗೆ ಪೀಠದ ಬುಡದಿಂದ ನಡುವಿನ ತನಕ ಇರುವಂತೆ ಹಾಕಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಲಿಪೀಠಕ್ಕೆ ಹೆಣಿಗೆ ಕೆಲಸದಿಂದ ಕಂಚಿನ ಜಾಳಿಗೆಯನ್ನು ಮಾಡಿದರು. ಅದು ಬಲಿಪೀಠದ ಸುತ್ತಲಿರುವ ಕಟ್ಟಿಗೆಯ ಕಟ್ಟೆಯ ಕೆಳಗೆ ಇದ್ದು, ಅದನ್ನು ಬಲಿಪೀಠದ ಕೆಳಭಾಗದಿಂದ ಮಧ್ಯದವರೆಗೆ ಇರುವಂತೆ ಮಾಡಿದರು.