Exodus 39:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಎರಡು ಚಿನ್ನದ ಉಂಗುರಗಳನ್ನು ಏಫೋದಿನ ಮುಂಭಾಗದಲ್ಲಿ ಭುಜದ ಪಟ್ಟಿಗಳ ಕೆಳಭಾಗದಲ್ಲಿ ಇರಿಸಿದರು. ಈ ಉಂಗುರಗಳು ನಡುಕಟ್ಟಿನ ಮೇಲ್ಗಡೆಯಲ್ಲಿರುವ ಕಟ್ಟಿನ ಹತ್ತಿರ ಇದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಏಫೋದ್ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಿದರು.
Kannada BSI Bible 2016
ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ ಎಫೋದಿನ ಮುಂಬದಿಯ ಕೆಳಗಿನ ಎರಡು ಭಾಗಗಳಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಿದರು.
Kannada Bible (KNCL) BSI 2016
ಮತ್ತು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ಚಿತ್ರಕಲೆಯಿಂದ ಕೂಡಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ, ಏಫೋದಿನ ಮುಂಬದಿಯ ಕೆಳಗಿನ ಎರಡು ಹೆಗಲಿನ ಪಟ್ಟಿಗಳಲ್ಲಿ, ಏಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು.