Exodus 39:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಅವರು ನೀಲಿದಾರದಿಂದ ದೈವನಿರ್ಣಯ ಪದಕದ ಉಂಗುರಗಳನ್ನು ಏಫೋದಿನ ಉಂಗುರಗಳಿಗೆ ಕಟ್ಟಿದರು. ಈ ರೀತಿಯಾಗಿ ದೈವನಿರ್ಣಯ ಪದಕವು ನಡುಕಟ್ಟಿಗೆ ಹತ್ತಿರವಾಗಿದ್ದು ಏಫೋದಿಗೆ ಬಿಗಿಯಾಗಿ ಅಂಟಿಕೊಂಡಿತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಅವರು ಎಲ್ಲವನ್ನೂ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎದೆಯಪದಕವು ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಿದರು.
Kannada BSI Bible 2016
ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಆ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪದಕವು ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿದಾರದಿಂದ ಕಟ್ಟಿದರು. ಯೆಹೋವನು ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದನು.
Kannada Bible (KNCL) BSI 2016
ಪದಕವು ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿದಾರದಿಂದ ಕಟ್ಟಿದರು. ಸರ್ವೇಶ್ವರ ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಆ ಎದೆಪದಕವನ್ನು ಏಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ ಎದೆಪದಕವು ಏಫೋದನ್ನು ಬಿಟ್ಟು ಅಲ್ಲಾಡದಂತೆಯೂ ಅದರ ಉಂಗುರಗಳ ಮೂಲಕವಾಗಿ ಏಫೋದಿನ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಿದರು.