Exodus 39:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ನಿಲುವಂಗಿಯ ಕೆಳಅಂಚಿನ ಸುತ್ತಲೆಲ್ಲ ದಾಳಿಂಬೆ ಹಣ್ಣುಗಳೂ ಗೆಜ್ಜೆಗಳೂ ಇದ್ದವು. ಪ್ರತಿ ದಾಳಿಂಬೆ ಹಣ್ಣಿನ ನಡುವೆ ಒಂದೊಂದು ಗೆಜ್ಜೆ ಇತ್ತು. ಯಾಜಕರು ಯೆಹೋವನ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ನಿಲುವಂಗಿ ಇದಾಗಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗಾಗಿ ಇರುವ ಆ ನಿಲುವಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು.
Kannada BSI Bible 2016
ಸೇವೆ ಗೋಸ್ಕರ ಮಾಡಿದ ನಿಲುವಂಗಿಯ ಅಂಚಿನ ಮೇಲೆ ಸುತ್ತಲೂ ಒಂದು ಗಂಟೆ ಒಂದು ದಾಳಿಂಬರದ ಮೇರೆಗೆ ಇಟ್ಟರು, ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚಿನ್ನದ ಗೆಜ್ಜೆಯೂ ದಾಳಿಂಬದಂತಿರುವ ಚಂಡೂ ಒಂದಾದ ಮೇಲೆ ಒಂದು ದೇವರ ಸೇವೆಗೋಸ್ಕರವಾದ ಆ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು.
Kannada Bible (KNCL) BSI 2016
ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗೋಸ್ಕರವಾದ ಆ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಗೆಜ್ಜೆ, ಒಂದು ದಾಳಿಂಬೆಯಂತಿರುವ ಚೆಂಡನ್ನು ಒಂದಾದ ಮೇಲೆ ಒಂದು ಸೇವೆಗೋಸ್ಕರ ಮಾಡಿದ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು.