Exodus 39:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಅವರು ಶ್ರೇಷ್ಠವಾದ ನಾರುಬಟ್ಟೆಯಿಂದಲೂ ಮತ್ತು ನೀಲಿ, ನೇರಳೆ, ಕೆಂಪುದಾರಗಳಿಂದಲೂ ನಡುಕಟ್ಟನ್ನು ಮಾಡಿದರು. ಈ ಬಟ್ಟೆಗೆ ಕಸೂತಿ ಹಾಕಲಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಈ ವಸ್ತುಗಳನ್ನು ಮಾಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.
Kannada BSI Bible 2016
ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹುರಿನಾರಿನಿಂದ ಚಡ್ಡಿಗಳನ್ನೂ ಹುರಿನಾರಿನಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಬುಟೇದಾರೀ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.
Kannada Bible (KNCL) BSI 2016
ಹುರಿನಾರಿನಿಂದ ಚಡ್ಡಿಗಳನ್ನೂ ಹುರಿನಾರಿನಿಂದಲೂ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಯವಾದ ನಾರಿನಿಂದ ಹೊಸೆದ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಹೆಣಿಗೆಯ ಕೆಲಸದಿಂದ ನಡುಕಟ್ಟನ್ನೂ ಮಾಡಿದರು. ಇವುಗಳನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.