Exodus 39:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಅವರು ಪವಿತ್ರಕಿರೀಟವನ್ನೂ ಅಪ್ಪಟ ಬಂಗಾರದಿಂದ ಮಾಡಿದರು. ಅವರು ಬಂಗಾರದಲ್ಲಿ ಅಕ್ಷರಗಳನ್ನು ಕೆತ್ತಿದರು. ಅವರು, “ಯೆಹೋವನಿಗೆ ಪವಿತ್ರವಾದದ್ದು” ಎಂಬ ಮಾತುಗಳನ್ನು ಬರೆದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಚೊಕ್ಕ ಬಂಗಾರದಿಂದ ಪರಿಶುದ್ಧ ಕಿರೀಟಕ್ಕೆ ಬಾಸಿಂಗವನ್ನು ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ, ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಬರೆದರು.
Kannada BSI Bible 2016
ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಚೊಕ್ಕಬಂಗಾರದಿಂದ ಪರಿಶುದ್ಧ ಕಿರೀಟವಾಗಿರುವ ಪಟ್ಟವನ್ನು ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ - ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಬರೆದರು.
Kannada Bible (KNCL) BSI 2016
ಮತ್ತು ಚೊಕ್ಕಬಂಗಾರದಿಂದ ಪರಿಶುದ್ಧ ಕಿರೀಟದಂಥ ಪಟ್ಟಿಯನ್ನು ಸರ್ವೇಶ್ವರನಿಗೆ ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ - “ಸರ್ವೇಶ್ವರನಿಗೆ ಮೀಸಲು” ಎಂಬ ಲಿಪಿಯನ್ನು ಬರೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶುದ್ಧ ಬಂಗಾರದಿಂದ ಪರಿಶುದ್ಧ ಕಿರೀಟದ ತಗಡನ್ನು ಮಾಡಿ, ಮುದ್ರೆ ಕೆತ್ತುವ ಪ್ರಕಾರ ಅದರಲ್ಲಿ, “ಯೆಹೋವ ದೇವರಿಗೆ ಪರಿಶುದ್ಧ,” ಎಂದು ಕೆತ್ತಿಸಿದರು,