Exodus 39:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ನಡುಕಟ್ಟನ್ನು ಹೆಣೆದು ಏಫೋದಿಗೆ ಬಿಗಿಯಾಗಿ ಕಟ್ಟಿದರು. ಏಫೋದನ್ನು ಮಾಡಿದಂತೆಯೇ ಇದನ್ನು ಮಾಡಲಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಇದನ್ನು ಮಾಡುವುದಕ್ಕೆ ಚಿನ್ನದ ದಾರ, ಶ್ರೇಷ್ಠ ನಾರುಬಟ್ಟೆಯನ್ನು ಮತ್ತು ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕವಚದ ಮೇಲಿರುವ ಕಸೂತಿ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲು, ಚಿನ್ನದ ದಾರಗಳಿಂದಲು ಹಾಗೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಮಾಡಲ್ಪಟ್ಟಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.
Kannada BSI Bible 2016
ಅದರ ಮೇಲಿರುವ ವಿಚಿತ್ರವಾದ ಎಫೋದಿನ ನಡು ಕಟ್ಟು ಅದೇ ಕೆಲಸಕ್ಕನುಸಾರವಾಗಿ ಚಿನ್ನ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳುಳ್ಳದ್ದಾಗಿದ್ದು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕವಚದ ಮೇಲಿರುವ ವಿಚಿತ್ರವಾದ ಬುಟೇದಾರಿಯ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ಹುರಿನಾರಿನ ಬಟ್ಟೆಯಿಂದಲೂ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಉಂಟಾಗಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.
Kannada Bible (KNCL) BSI 2016
ಕವಚದ ಮೇಲಿದ್ದ ಅಪೂರ್ವವಾದ ಕಸೂತಿ ನಡುಕಟ್ಟು ಕವಚಕ್ಕೆ ಅಂಗವಾಗಿದ್ದು ಅದರಂತೆಯೇ ಹುರಿನಾರಿನ ಬಟ್ಟೆಯಿಂದಲೂ, ಚಿನ್ನದ ದಾರದಿಂದಲೂ ಮತ್ತು ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲು ತಯಾರಿಸಲಾಗಿತ್ತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಲಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಮೇಲಿರುವ ಅದರ ಮೇಲಿರುವ ಕಸೂತಿ ಕೆಲಸದ ಏಫೋದಿನ ನಡುಕಟ್ಟನ್ನು ಒಂದೇ ರೀತಿಯ ವಸ್ತುಗಳಿಂದ ತಯಾರಿಸಬೇಕು ಅಂದರೆ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಲಾಗಿತ್ತು, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.