Exodus 39:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಅವರು ಈ ರತ್ನಗಳನ್ನು ಏಫೋದಿನ ಭುಜದ ಪಟ್ಟಿಯಲ್ಲಿ ಇಟ್ಟರು. ಇಸ್ರೇಲರನ್ನು ದೇವರ ಜ್ಞಾಪಕಕ್ಕೆ ತರುವಂತೆ ಈ ರತ್ನಗಳು ಇಡಲ್ಪಟ್ಟವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ರತ್ನಗಳನ್ನು ಇಸ್ರಾಯೇಲರ ಜ್ಞಾಪಕಾರ್ಥವಾಗಿ ಅವುಗಳನ್ನು ಏಫೋದ್ ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದನು.
Kannada BSI Bible 2016
ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಎರಡು ರತ್ನಗಳು ಇಸ್ರಾಯೇಲ್ಯರ ಜ್ಞಾಪಕಾರ್ಥವಾದ ರತ್ನಗಳಾಗುವಂತೆ ಅವುಗಳನ್ನು ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದನು. ಯೆಹೋವನು ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದನು.
Kannada Bible (KNCL) BSI 2016
ಆ ಎರಡು ರತ್ನಗಳು ಇಸ್ರಯೇಲರ ಜ್ಞಾಪಕಾರ್ಥವಾದ ರತ್ನಗಳಾಗುವಂತೆ ಅವುಗಳನ್ನು ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದರು. ಸರ್ವೇಶ್ವರ ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ಆ ಎರಡು ರತ್ನಗಳನ್ನು ಏಫೋದಿನ ಹೆಗಲಿನ ಭಾಗದ ಮೇಲೆ ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗುವಂತೆ ಇಟ್ಟರು.