Exodus 39:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವರು ದೈವನಿರ್ಣಯ ಪದಕವನ್ನು ಮಾಡಿದರು. ಏಫೋದಿನಂತೆಯೇ ಇದು ಸಹ ಬುಟೇದಾರೀ ಕೆಲಸವಾಗಿತ್ತು. ಅದನ್ನು ಚಿನ್ನದ ದಾರಗಳಿಂದಲೂ ಶ್ರೇಷ್ಠವಾದ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪುದಾರಗಳಿಂದಲೂ ಮಾಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಫೋದ್ ಕವಚದಂತೆಯೇ ಕಸೂತಿಯಿಂದಲೂ ಕೆಲಸದಿಂದ ಚಿನ್ನದ ದಾರಗಳಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ನಯವಾದ ನಾರಿನ ಬಟ್ಟೆಯಲ್ಲಿ ಎದೆಯಪದಕವನ್ನು ಮಾಡಿದನು.
Kannada BSI Bible 2016
ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕವಚದಂತೆಯೇ ಬುಟೇದಾರಿಯ ಕೆಲಸದಿಂದ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಲ್ಲಿ ಚೀಲದ ಪದಕವನ್ನು ಮಾಡಿದನು.
Kannada Bible (KNCL) BSI 2016
‘ಏಫೋದ್’ ಕವಚದಂತೆಯೇ, ಚಿನ್ನದ ದಾರದಿಂದಲೂ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಲ್ಲಿ ಕಸೂತಿ ಕೆಲಸದಿಂದ ಕೂಡಿದ ಒಂದು ಚೀಲದಂಥ ವಕ್ಷಪದಕವನ್ನು ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಂದರೆ ಏಫೋದಿನ ಕೆಲಸದ ಹಾಗೆಯೇ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿದರು.