Exodus 4:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಮೋಶೆಯು ಯೆಹೋವನಿಗೆ, “ಆದರೆ ನೀನು ನನ್ನನ್ನು ಕಳುಹಿಸಿರುವೆ ಎಂದು ಇಸ್ರೇಲರು ನಂಬುವುದೂ ಇಲ್ಲ; ಕೇಳುವುದೂ ಇಲ್ಲ. ಅವರು, ‘ಯೆಹೋವನು ನಿನಗೆ ಪ್ರತ್ಯಕ್ಷನಾಗಲಿಲ್ಲ’ ಎಂದು ಹೇಳುವರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲ ಎಂದು ಹೇಳಬಹುದು?” ಎಂದನು.
Kannada BSI Bible 2016
ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಮೋಶೆ - ಚಿತ್ತೈಸು; ಅವರು ನನ್ನನ್ನು ನಂಬದೆ ನನ್ನ ಮಾತಿಗೆ ಕಿವಿಗೊಡದೆ ಹೋದಾರು; ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲವೆಂದು ಹೇಳಾರು ಎನ್ನಲು,
Kannada Bible (KNCL) BSI 2016
ಆಗ ಮೋಶೆ ಉತ್ತರ ನೀಡಿ,” ಆಲಿಸಬೇಕು; ಆ ಜನರು ನನ್ನನ್ನು ನಂಬದೆ ನನ್ನ ಮಾತಿಗೆ ಕಿವಿಗೊಡದೆ ಹೋಗಬಹುದು: ‘ಸರ್ವೇಶ್ವರ ಸ್ವಾಮಿ ನಿನಗೆ ಕಾಣಿಸಿಕೊಂಡಿದ್ದೇ ಇಲ್ಲ’ ಎಂದು ಹೇಳಬಹುದು” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ‘ಯೆಹೋವ ದೇವರು ನಿನಗೆ ಕಾಣಿಸಿಕೊಂಡೇ ಇಲ್ಲ,’ ಎಂದು ಹೇಳಬಹುದು,” ಎಂದನು.

Recommended Reading