Exodus 4:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ ಹೋಗು. ನೀನು ಮಾತಾಡುವಾಗ ನಾನೇ ನಿನ್ನೊಂದಿಗಿರುವೆನು. ನೀನು ಹೇಳಬೇಕಾದ ಮಾತುಗಳನ್ನು ನಾನು ನಿನಗೆ ಕೊಡುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ ಈಗಲೇ ನೀನು ಹೊರಡು, ನಾನು ನಿನ್ನಗೆ ಮಾತನಾಡಲು ಬೇಕಾದ ಸಾಮರ್ಥ್ಯವನ್ನು ಕೊಡುತ್ತಾ, ನೀನು ಮಾತನಾಡಬೇಕಾದದ್ದನ್ನು ನಿನಗೆ ಬೋಧಿಸುವೆನು” ಎಂದು ಹೇಳಿದನು.
Kannada BSI Bible 2016
ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವದರಿಂದ ನೀನು ಹೊರಟುಹೋಗು; ನಾನು ನಿನ್ನ ಬಾಯಿಗೆ ಸಹಾಯವಾಗಿದ್ದು ನೀನು ಮಾತಾಡಬೇಕಾದದ್ದನ್ನು ಬೋಧಿಸುವೆನು ಎಂದು ಹೇಳಿದನು.
Kannada Bible (KNCL) BSI 2016
ಆದುದರಿಂದ ಈಗಲೇ ಹೊರಡು; ನಿನ್ನ ಬಾಯಲ್ಲಿ ನಾನೇ ಇರುವೆನು; ನೀನು ಮಾತಾಡಬೇಕಾದುದನ್ನು ನಿನಗೆ ಕಲಿಸಿಕೊಡುವೆನು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೆ ಈಗ ಹೋಗು, ನಾನೇ ನಿನ್ನ ಸಂಗಡವಿದ್ದು, ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು,” ಎಂದರು.