Exodus 4:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಮೋಶೆಯ ಮೇಲೆ ಕೋಪಗೊಂಡು, “ಹಾಗಾದರೆ ನಿನ್ನ ಅಣ್ಣನಾದ ಲೇವಿ ಕುಟುಂಬದ ಆರೋನನನ್ನೂ ನಾನು ಉಪಯೋಗಿಸುವೆನು. ಅವನಿಗೆ ವಾಕ್ಚಾತುರ್ಯವಿದೆ. ಈಗ ಅವನು ನಿನ್ನ ಬಳಿಗೆ ಬರುತ್ತಿದ್ದಾನೆ. ನಿನ್ನನ್ನು ಕಂಡು ಅವನಿಗೆ ಸಂತೋಷವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಮೋಶೆಯ ಮೇಲೆ ಕೋಪಗೊಂಡು ಅವನಿಗೆ, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲವನೆಂದು ನನಗೆ ತಿಳಿದಿದೆ. ಅವನೇ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿದಾಗ ಅವನು ತನ್ನ ಹೃದಯದಲ್ಲಿ ಸಂತೋಷಿಸುವನು.
Kannada BSI Bible 2016
ಕರ್ತನು ಮೋಶೆಯ ಮೇಲೆ ಕೋಪಗೊಂಡು--ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡ ಬಲ್ಲನೆಂದು ನಾನು ಬಲ್ಲೆನು. ಇಗೋ, ಅವನು ನಿನ್ನನ್ನು ಎದುರು ಗೊಳ್ಳುವದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿ ತನ್ನ ಹೃದಯದಲ್ಲಿ ಆನಂದಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅವನ ಮೇಲೆ ಕೋಪಗೊಂಡು - ನಿನ್ನ ಅಣ್ಣನಾಗಿರುವ ಲೇವಿಯನಾದ ಆರೋನನಿದ್ದಾನಲ್ಲಾ, ಅವನು ಚೆನ್ನಾಗಿ ಮಾತಾಡಬಲ್ಲವನೆಂದು ನನಗೆ ಗೊತ್ತದೆ; ಅವನೇ ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ; ನಿನ್ನನ್ನು ಕಂಡು ಸಂತೋಷಿಸುವನು.
Kannada Bible (KNCL) BSI 2016
ಅವನಿಗೆ, “ಲೇವಿಯನಾದ ಆರೋನನು ನಿನಗೆ ಅಣ್ಣನಲ್ಲವೆ? ಅವನು ಚೆನ್ನಾಗಿ ಮಾತಾಡಬಲ್ಲನೆಂದು ನನಗೆ ಗೊತ್ತಿದೆ. ಇಗೋ, ಅವನೇ ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ನಿನ್ನನ್ನು ಕಂಡು ಆನಂದಿಸಲಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಯ ಮೇಲೆ ಬೇಸರಗೊಂಡು, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲನೆಂದು ನನಗೆ ಗೊತ್ತಿದೆ. ಅವನು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ಕಂಡು, ತನ್ನ ಹೃದಯದಲ್ಲಿ ಆನಂದಿಸುವನು.