Exodus 4:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ನಿನ್ನೊಡನೆ ಫರೋಹನ ಬಳಿಗೆ ಬರುವನು. ನೀನು ಹೇಳಬೇಕಾದದ್ದನ್ನು ನಾನೇ ನಿನಗೆ ತಿಳಿಸುವೆನು. ಅದನ್ನು ನೀನು ಆರೋನನಿಗೆ ತಿಳಿಸು. ಆರೋನನು ಫರೋಹನೊಡನೆ ಸರಿಯಾಗಿ ಮಾತಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಅವನ ಸಂಗಡ ಮಾತನಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಿಕೊಡು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.
Kannada BSI Bible 2016
ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಅವನ ಸಂಗಡ ಮಾತಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.
Kannada Bible (KNCL) BSI 2016
ನೀನು ಅವನ ಸಂಗಡ ಮಾತಾಡಿ ಹೇಳಬೇಕಾದ ವಿಷಯಗಳನ್ನು ತಿಳಿಸು. ನಾನು ನಿನಗೂ ಅವನಿಗೂ ಹೇಗೆ ಮಾತಾಡಬೇಕೆಂದು ತಿಳಿಸಿ ನೀವು ಮಾಡಬೇಕಾದುದನ್ನು ಕಲಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಸಂಗಡ ನೀನು ಮಾತನಾಡಿ, ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಂದಲೂ ಅವನ ಬಾಯಿಂದಲೂ ನಾನೇ ಮಾತನಾಡಿ ನೀವು ಮಾಡಬೇಕಾದುದನ್ನು ಕಲಿಸುವೆನು.