Exodus 4:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆ ಇನ್ನೂ ಮಿದ್ಯಾನಿನಲ್ಲಿದ್ದಾಗ ಯೆಹೋವನು, “ಈಗ ನೀನು ಸುರಕ್ಷಿತವಾಗಿ ಈಜಿಪ್ಟಿಗೆ ಹೋಗಬಹುದು. ನಿನ್ನನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋಗಿದ್ದಾರೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮಿದ್ಯಾನಿನಲ್ಲಿ ಮೋಶೆಗೆ, ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗು. ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದನು.
Kannada BSI Bible 2016
ಇದಲ್ಲದೆ ಕರ್ತನು ಮಿದ್ಯಾನಿನಲ್ಲಿ ಮೋಶೆಗೆ--ಐಗುಪ್ತಕ್ಕೆ ಹಿಂತಿರುಗಿ ಹೋಗು; ನಿನ್ನ ಪ್ರಾಣವನ್ನು ಹುಡುಕಿದ ಜನರೆಲ್ಲಾ ಸತ್ತಿದ್ದಾರೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿುದ್ಯಾನ್‍ದೇಶದಲ್ಲಿ ಯೆಹೋವನು ಮೋಶೆಗೆ - ನೀನು ಐಗುಪ್ತದೇಶಕ್ಕೆ ತಿರಿಗಿ ಹೋಗು; ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದು ಹೇಳಿದ್ದರಿಂದ
Kannada Bible (KNCL) BSI 2016
ಮಿದ್ಯಾನ್ ನಾಡಿನಲ್ಲಿ ಸರ್ವೇಶ್ವರ ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಮರಳಿ ಹೋಗು. ನಿನ್ನನ್ನು ಕೊಲ್ಲಬೇಕೆಂದಿದ್ದವರೆಲ್ಲರು ಸತ್ತುಹೋದರು,” ಎಂದು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮಿದ್ಯಾನಿನಲ್ಲಿ ಮೋಶೆಗೆ, “ಈಜಿಪ್ಟಿಗೆ ಹಿಂದಿರುಗಿ ಹೋಗು. ಏಕೆಂದರೆ ನಿನ್ನನ್ನು ಕೊಲ್ಲಬೇಕೆಂದಿದ್ದ ಜನರೆಲ್ಲಾ ಸತ್ತಿದ್ದಾರೆ,” ಎಂದರು.