Exodus 4:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಮೋಶೆ ತನ್ನ ಹೆಂಡತಿಯನ್ನೂ ಗಂಡುಮಕ್ಕಳನ್ನೂ ಕತ್ತೆಗಳ ಮೇಲೆ ಕುಳ್ಳಿರಿಸಿ ಈಜಿಪ್ಟ್ ದೇಶಕ್ಕೆ ಮರಳಿ ಪ್ರಯಾಣ ಮಾಡಿದನು. ಮೋಶೆಯು ಯೆಹೋವನ ಶಕ್ತಿಯಿಂದ ಕೂಡಿದ ತನ್ನ ಊರುಗೋಲನ್ನು ಹಿಡಿದುಕೊಂಡು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಕುಳ್ಳಿರಿಸಿ ಅವರನ್ನು ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಜೊತೆಯಲ್ಲಿ ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು.
Kannada BSI Bible 2016
ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಹತ್ತಿಸಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು.
Kannada Bible (KNCL) BSI 2016
ಆದ್ದರಿಂದ ಮೋಶೆ ತನ್ನ ಮಡದಿ ಮಕ್ಕಳನ್ನು ಹೇಸರ ಕತ್ತೆಯ ಮೇಲೆ ಏರಿಸಿಕೊಂಡು ಈಜಿಪ್ಟಿಗೆ ಹೊರಟುಹೋದನು. ದೇವದಂಡ ಅವನ ಕೈಯಲ್ಲಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರೆದುಕೊಂಡು ಅವರನ್ನು ಕತ್ತೆಯ ಮೇಲೆ ಕುಳ್ಳಿರಿಸಿ, ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಬಂದನು. ಇದಲ್ಲದೆ ದೇವರ ಕೋಲನ್ನು ಕೈಯಲ್ಲಿ ತೆಗೆದುಕೊಂಡನು.