Exodus 4:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆ ಈಜಿಪ್ಟಿಗೆ ಪ್ರಯಾಣ ಮಾಡುತ್ತಿದ್ದಾಗ ಯೆಹೋವನು ಅವನೊಡನೆ ಮಾತಾಡಿ, “ನೀನು ಫರೋಹನೊಂದಿಗೆ ಮಾತಾಡುವಾಗ ನಾನು ತೋರಿಸಿಕೊಟ್ಟ ಅದ್ಭುತಕಾರ್ಯಗಳನ್ನೆಲ್ಲಾ ಅವನ ಮುಂದೆ ಮಾಡು. ಆದರೂ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ಇಸ್ರೇಲರನ್ನು ಹೋಗಗೊಡಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.
Kannada BSI Bible 2016
ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಗೆ ಇಂತೆಂದನು - ನೀನು ಐಗುಪ್ತ ದೇಶಕ್ಕೆ ತಿರಿಗಿ ಬಂದಾಗ ನಾನು ನಿನಗೆ ತೋರಿಸಿಕೊಟ್ಟ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಜನರನ್ನು ಹೋಗಗೊಡಿಸುವದಿಲ್ಲ.
Kannada Bible (KNCL) BSI 2016
ಸರ್ವೇಶ್ವರ ಮೋಶೆಗೆ ಮತ್ತೆ ಇಂತೆಂದರು: “ನೀನು ಈಜಿಪ್ಟಿಗೆ ಮರಳಿದಾಗ ನಾನು ನಿನಗೆ ತೋರಿಸಿಕೊಟ್ಟ ಸೂಚಕಕಾರ್ಯಗಳನ್ನೆಲ್ಲಾ ಫರೋಹ ರಾಜನ ಮುಂದೆ ಮಾಡಿ ತೋರಿಸು. ಆದರೆ ನಾನು ಅವನ ಹೃದಯವನ್ನು ಕಲ್ಲಾಗಿಸುವೆನು. ಅವನು ಇಸ್ರಯೇಲರನ್ನು ಹೋಗಗೊಡಿಸುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗುವಾಗ, ನಾನು ನಿನ್ನ ಕೈಯಲ್ಲಿ ಮಾಡಿಸಿದ ಎಲ್ಲಾ ಸೂಚಕಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವುದಿಲ್ಲ.