Exodus 4:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಚಿಪ್ಪೋರಳು ಕಲ್ಲಿನ ಚೂರಿಯನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿಮಾಡಿ ಚರ್ಮವನ್ನು ತೆಗೆದುಕೊಂಡು ಮೋಶೆಯ ಪಾದಗಳಿಗೆ ಮುಟ್ಟಿಸಿ, “ನೀನು ನನಗೆ ರಕ್ತಧಾರೆಯಿಂದಾದ ಮದುವಣಿಗನಾದೆ” ಅಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವಾಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಮೋಶೆಯ ಪಾದಗಳಿಗೆ ಮುಟ್ಟಿಸಿದಳು. ನಂತರ ಅವಳು, “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು” ಎಂದಳು.
Kannada BSI Bible 2016
ಆಗ ಚಿಪ್ಪೋರಳು ಹದವಾದ ಕಲ್ಲನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಅವನ ಕಾಲುಗಳ ಮುಂದೆ ಹಾಕಿ ಮೋಶೆಗೆ--ನಿಜವಾಗಿ ನೀನು ನನಗೆ ರಕ್ತದ ಗಂಡನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವಾಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ, ಮೋಶೆಗೆ - ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನಾದಿ ಎಂದು ಹೇಳಿ ಕತ್ತರಿಸಿದ್ದನ್ನು ಅವನ ಪಾದಗಳಿಗೆ ಮುಟ್ಟಿಸಲು ಯೆಹೋವನು ಅವನನ್ನು ಉಳಿಸಿದನು.
Kannada Bible (KNCL) BSI 2016
ಆಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ ಮೋಶೆಗೆ, “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗ,” ಎಂದು ಹೇಳಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಿಪ್ಪೋರಳು ಕಲ್ಲಿನ ಚೂರಿ ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ, ಅದನ್ನು ಮೋಶೆಯ ಪಾದಗಳಿಗೆ ಮುಟ್ಟಿಸಿ ಅವನಿಗೆ, “ಖಂಡಿತವಾಗಿ ನೀನು ನನಗೆ ರಕ್ತಧಾರೆಯಿಂದಾದ ಗಂಡನು,” ಎಂದಳು.