Exodus 4:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಆರೋನನೊಡನೆ ಮಾತಾಡಿ ಅವನಿಗೆ, “ಅರಣ್ಯಕ್ಕೆ ಹೋಗಿ ಮೋಶೆಯನ್ನು ಭೇಟಿಯಾಗು” ಎಂದು ಹೇಳಿದ್ದನು. ಆದ್ದರಿಂದ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಭೇಟಿಯಾದನು. ಆರೋನನು ಮೋಶೆಯನ್ನು ಕಂಡು ಅವನಿಗೆ ಮುದ್ದಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೆಹೋವನು ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳುವುದಕ್ಕೆ ಮರುಭೂಮಿಗೆ ಹೊರಟುಹೋಗು” ಎಂದನು. ಅವನು ಹೋಗಿ ದೇವರ ಬೆಟ್ಟದಲ್ಲೇ ಅವನನ್ನು ಎದುರುಗೊಂಡು ಮುದ್ದಿಟ್ಟನು.
Kannada BSI Bible 2016
ಇದಲ್ಲದೆ ಕರ್ತನು ಆರೋನನಿಗೆ--ಮೋಶೆ ಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೋಗು ಅಂದನು. ಅವನು ಹೋಗಿ ದೇವರ ಬೆಟ್ಟದಲ್ಲಿ ಅವನನ್ನು ಎದುರುಗೊಂಡು ಮುದ್ದಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೆಹೋವನು ಆರೋನನಿಗೆ - ನೀನು ಮೋಶೆಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೊರಟುಹೋಗು ಎಂದು ಹೇಳಲಾಗಿ ಅವನು ಹೋಗಿ ದೇವರ ಬೆಟ್ಟದಲ್ಲೇ ಅವನನ್ನು ಎದುರುಗೊಂಡು ಮುದ್ದಿಟ್ಟನು.
Kannada Bible (KNCL) BSI 2016
ಇದಲ್ಲದೆ ಸರ್ವೇಶ್ವರ ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳಲು ಮರುಭೂಮಿಗೆ ತೆರಳು,” ಎಂದರು. ಅಂತೆಯೇ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋವ ದೇವರು ಆರೋನನಿಗೆ, “ಮೋಶೆಯನ್ನು ಎದುರುಗೊಳ್ಳುವದಕ್ಕೆ ಮರುಭೂಮಿಗೆ ಹೋಗು,” ಎಂದರು. ಆಗ ಅವನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.