Exodus 4:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೆಹೋವನು ಮೋಶೆಗೆ, “ನಾನು ನಿನಗೆ ಇನ್ನೊಂದು ಸಾಕ್ಷಿಯನ್ನು ಕೊಡುತ್ತೇನೆ. ನಿನ್ನ ಕೈಯನ್ನು ಉಡಿಯಲ್ಲಿ ಹಾಕು” ಅಂದನು. ಮೋಶೆ ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದಕ್ಕೆ ತೊನ್ನು ಹಿಡಿದಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ತಿರುಗಿ ಅವನಿಗೆ, “ನಿನ್ನ ಕೈಯನ್ನು ಎದೆಯಭಾಗದೊಳಗೆ ಇಟ್ಟುಕೋ” ಎಂದು ಹೇಳಿದನು. ಅವನು ಹಾಗೆ ಇಟ್ಟುಕೊಂಡು ಹೊರಗೆ ತೆಗೆಯಲು ಅವನ ಕೈ ಕುಷ್ಠ ಹತ್ತಿ ಹಿಮದಂತೆ ಬೆಳ್ಳಗಾಗಿತ್ತು.
Kannada BSI Bible 2016
ಇದಲ್ಲದೆ ಕರ್ತನು ಅವನ ಸಂಗಡ ಇನ್ನೂ ಮಾತನಾಡಿ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆಯಲು ಇಗೋ, ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೆ ಯೆಹೋವನು ಅವನಿಗೆ - ನಿನ್ನ ಕೈಯನ್ನು ಉಡಿಯಲ್ಲಿ ಇಟ್ಟುಕೋ ಎಂದು ಹೇಳಿದನು. ಅವನು ಉಡಿಯಲ್ಲಿ ಇಟ್ಟುಕೊಂಡು ಹೊರಗೆ ತೆಗೆಯಲು ಅದು ತೊನ್ನು ಹತ್ತಿ ಹಿಮದಂತೆ ಬೆಳ್ಳಗಾಗಿತ್ತು.
Kannada Bible (KNCL) BSI 2016
ಮತ್ತೆ ಸರ್ವೇಶ್ವರ ಅವನಿಗೆ, “ನಿನ್ನ ಕೈಯನ್ನು ನಿನ್ನ ಉಡಿಗೆಯಲ್ಲಿ ಇಟ್ಟುಕೊ,” ಎಂದರು. ಅಂತೆಯೇ ಉಡಿಗೆಯಲ್ಲಿ ಇಟ್ಟು ಹೊರಗೆ ತೆಗೆದಾಗ ಅವನ ಕೈ ತೊನ್ನುಹತ್ತಿ ಹಿಮದಂತೆ ಬೆಳ್ಳಗಾಗಿ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋವ ದೇವರು ಅವನ ಸಂಗಡ ಇನ್ನೂ ಮಾತನಾಡಿ, “ನಿನ್ನ ಕೈಯನ್ನು ನಿನ್ನ ಉಡಿಯಲ್ಲಿ ಇಟ್ಟುಕೋ,” ಎಂದಾಗ, ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆದನು. ಇಗೋ, ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು.