Exodus 4:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ದೇವರು, “ನಿನ್ನ ಕೈಯನ್ನು ತಿರಿಗಿ ಉಡಿಯಲ್ಲಿ ಹಾಕು” ಅಂದನು. ಅಂತೆಯೇ ಮೋಶೆಯು ತನ್ನ ಕೈಯನ್ನು ಮತ್ತೆ ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದು ಮೊದಲಿನಂತೆ ಆಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅವನಿಗೆ ನಿನ್ನ ಕೈಯನ್ನು ತಿರುಗಿ ಎದೆಯಭಾಗದೊಳಗೆ “ಸೇರಿಸು” ಎಂದು ಹೇಳಿದನು. ಅವನು ಅದನ್ನು ತಿರುಗಿ ಎದೆಯಭಾಗದೊಳಗೆ ಸೇರಿಸಿ ತೆಗೆದು ನೋಡಿದಾಗ ಅದು ಉಳಿದ ದೇಹದಂತೆ ಆಗಿತ್ತು.
Kannada BSI Bible 2016
ಆತನು ಅವನಿಗೆ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಉಡಿಯಿಂದ ಹೊರಗೆ ತೆಗೆಯಲು ಇಗೋ, ಅದು ಅವನ ಬೇರೆ ದೇಹದಂತಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅವನಿಗೆ - ನಿನ್ನ ಕೈಯನ್ನು ತಿರಿಗಿ ಉಡಿಯಲ್ಲಿ ಸೇರಿಸು ಎಂದು ಹೇಳಿದನು. ಅವನು ಅದನ್ನು ತಿರಿಗಿ ಉಡಿಯಲ್ಲಿ ಸೇರಿಸಿ ತೆಗೆದು ನೋಡಿದಾಗ ಅದು ಉಳಿದ ಮೈಯಂತೆ ಆಗಿತ್ತು.
Kannada Bible (KNCL) BSI 2016
ಸರ್ವೇಶ್ವರ ಅವನಿಗೆ, “ನಿನ್ನ ಕೈಯನ್ನು ತಿರುಗಿ ಉಡಿಗೆಯಲ್ಲಿ ಸೇರಿಸು,” ಎಂದು ಹೇಳಿದರು. ಹಾಗೆಯೆ ಅವನು ಅದನ್ನು ಉಡಿಗೆಯಲ್ಲಿ ಸೇರಿಸಿದನು. ಬಳಿಕ ತೆಗೆದು ನೋಡಿದಾಗ ಅದು ಉಳಿದ ಮೈಯಂತೆಯೇ ಆಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಅವನಿಗೆ, “ನಿನ್ನ ಕೈಯನ್ನು ಉಡಿಯಲ್ಲಿ ಹಾಕು,” ಎಂದಾಗ, ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ, ಉಡಿಯಿಂದ ಹೊರಗೆ ತೆಗೆದಾಗ, ಅದು ಅವನ ಉಳಿದ ಮೈಯಂತೆ ಆಗಿತ್ತು.