Exodus 4:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಈ ಎರಡು ಸೂಚಕಕಾರ್ಯಗಳನ್ನು ತೋರಿಸಿದ ನಂತರವೂ ಅವರು ನಂಬದಿದ್ದರೆ, ನೈಲ್ ನದಿಯಿಂದ ಸ್ವಲ್ಪ ನೀರನ್ನು ತೆಗೆದುಕೊಂಡು ಅದನ್ನು ನೆಲದ ಮೇಲೆ ಸುರಿ; ನೀರು ನೆಲವನ್ನು ಮುಟ್ಟಿದ ಕೊಡಲೇ ರಕ್ತವಾಗುವುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಎರಡು ಸೂಚಕಕಾರ್ಯಗಳನ್ನೂ, ಅವರು ನಂಬದೆಯೂ, ನಿನ್ನ ಮಾತನ್ನು ಕೇಳದೆಯೂ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದುಕೊಂಡು ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ಒಣಗಿದ ನೆಲದಲ್ಲಿ ಸುರಿದ ನೀರು ರಕ್ತವಾಗುವುದು” ಎಂದು ಹೇಳಿದನು.
Kannada BSI Bible 2016
ಆ ಎರಡೂ ಮಹತ್ಕಾರ್ಯ ಗಳನ್ನು ಅವರು ನಂಬದೆಯೂ ನಿನ್ನ ಮಾತನ್ನು ಕೇಳ ದೆಯೂ ಹೋದರೆ ನದಿಯ ನೀರನ್ನು ತೆಗೆದು ಒಣಗಿದ ನೆಲದಮೇಲೆ ಸುರಿಯಬೇಕು. ಆಗ ನೀನು ನದಿಯಿಂದ ತೆಗೆದ ನೀರು ಒಣಗಿದ ನೆಲದ ಮೇಲೆ ರಕ್ತವಾಗುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಎರಡು ಮಹತ್ಕಾರ್ಯಗಳನ್ನೂ ಅವರು ಮನಸ್ಸಿಗೆ ತೆಗೆದುಕೊಳ್ಳದೆಯೂ ನಿನ್ನ ಮಾತನ್ನು ನಂಬದೆಯೂ ಹೋದರೆ, ನೀನು ನೈಲ್ ನದಿಯಿಂದ ನೀರನ್ನು ತೆಗೆದುಕೊಂಡು ಒಣಗಿದ ನೆಲದಲ್ಲಿ ಸುರಿಯಬೇಕು; ಆಗ ನೆಲದಲ್ಲಿ ಸುರಿದ ನೀರು ರಕ್ತವಾಗುವದು ಎಂದು ಹೇಳಿದನು.
Kannada Bible (KNCL) BSI 2016
ಈ ಎರಡು ಸೂಚಕಕಾರ್ಯಗಳನ್ನೂ ಅವರು ಮನಸ್ಸಿಗೆ ತಂದುಕೊಳ್ಳದೆ ಹಾಗು ನಿನ್ನ ಮಾತನ್ನು ನಂಬದೆ ಹೋದರೆ ನೀನು ನೈಲ್ ನದಿಯಿಂದ ನೀರನ್ನು ತೆಗೆದುಕೊಂಡು ಒಣನೆಲದ ಮೇಲೆ ಸುರಿ. ಆಗ ನೆಲದಲ್ಲಿ ಸುರಿದ ನೀರು ರಕ್ತವಾಗುವುದು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಎರಡೂ ಸೂಚಕಕಾರ್ಯಗಳನ್ನು ಅವರು ನಂಬದೆ, ನಿನ್ನ ಮಾತನ್ನು ಕೇಳದೆ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದು, ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ನೀನು ತೆಗೆದ ನದಿಯ ನೀರು ಒಣಗಿದ ನೆಲದ ಮೇಲೆ ರಕ್ತವಾಗುವುದು,” ಎಂದರು.