Exodus 40:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರ ತಂದೆಯನ್ನು ಅಭಿಷೇಕಿಸಿದಂತೆ ಪುತ್ರರನ್ನೂ ಅಭಿಷೇಕಿಸು. ಆಗ ಅವರು ಯಾಜಕರಾಗಿ ತಲೆತಲೆಮಾರುಗಳವರೆಗೆ ನನ್ನ ಸೇವೆ ಮಾಡಬಹುದು. ನೀನು ಅವರನ್ನು ಅಭಿಷೇಕಿಸಿದಾಗ, ಅವರು ಯಾಜಕರಾಗುವರು. ಇನ್ನು ಮುಂದೆ ಆ ಕುಟುಂಬವು ಯಾಜಕರಾಗಿ ಮುಂದುವರಿಯುವುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು” ಎಂದು ಹೇಳಿದನು.
Kannada BSI Bible 2016
ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನನಗೋಸ್ಕರ ಯಾಜಕರಾಗುವದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವದು ಎಂದು ಹೇಳಿದನು.
Kannada Bible (KNCL) BSI 2016
ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನು ಕೂಡ ಅಭಿಷೇಕಿಸು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ, ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವರನ್ನೂ ನೀನು ಅಭಿಷೇಕಿಸು. ಅವರ ಈ ಅಭಿಷೇಕದಿಂದ ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವುದು,” ಎಂದು ಹೇಳಿದರು.