Exodus 40:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ, ಮೋಶೆಯು ಪವಿತ್ರಗುಡಾರದ ಮೇಲೆ ಹೊರಗಣ ಡೇರೆಯನ್ನು ಹಾಕಿಸಿದನು. ಬಳಿಕ ಅವನು ಹೊರಗಿನ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಈ ಕಾರ್ಯಗಳನ್ನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿ ಅದನ್ನು ಮರೆಮಾಡಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಅದನ್ನೆಲ್ಲಾ ಮಾಡಿದನು.
Kannada BSI Bible 2016
ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಅದನ್ನೆಲ್ಲಾ ಮಾಡಿದನು.
Kannada Bible (KNCL) BSI 2016
ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿದನು. ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಅದೆಲ್ಲವನ್ನು ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ, ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.