Exodus 40:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಮೋಶೆಯು ಪವಿತ್ರಪೆಟ್ಟಿಗೆಯನ್ನು ಪವಿತ್ರಗುಡಾರದೊಳಗೆ ತಂದನು. ಅದನ್ನು ಸಂರಕ್ಷಿಸುವುದಕ್ಕಾಗಿ ಸರಿಯಾದ ಸ್ಥಳದಲ್ಲಿ ಪರದೆಯನ್ನು ಹಾಕಿದನು. ಹೀಗೆ ಒಡಂಬಡಿಕೆ ಪೆಟ್ಟಿಗೆಯನ್ನು ಪರದೆಯ ಹಿಂಭಾಗದಲ್ಲಿರಿಸಿ ಸಂರಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ಪರದೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.
Kannada BSI Bible 2016
ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಮೇಲೆ ಕೃಪಾಸನವನ್ನಿಟ್ಟು ಮಂಜೂಷವನ್ನು ಗುಡಾರದೊಳಕ್ಕೆ ತಂದು ಅದರ ಮುಂದೆ ತೆರೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.
Kannada Bible (KNCL) BSI 2016
ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ತೆರೆಯನ್ನು ಇರಿಸಿ, ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಮಂಜೂಷವನ್ನು ಗುಡಾರಕ್ಕೆ ತಂದು, ಮರೆಮಾಡುವ ಪರದೆಯನ್ನಿರಿಸಿ, ಒಡಂಬಡಿಕೆಯ ಮಂಜೂಷವನ್ನು ಮರೆಮಾಡಿದನು. ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಮೋಶೆಯು ಮಾಡಿದನು.