Exodus 40:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಮೋಶೆಯು ಚಿನ್ನದ ವೇದಿಕೆಯನ್ನು ದೇವದರ್ಶನಗುಡಾರದೊಳಗೆ ಇರಿಸಿದನು. ಅವನು ವೇದಿಕೆಯನ್ನು ಪರದೆಯ ಮುಂಭಾಗದಲ್ಲಿ ಇರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಅವನು ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಎದುರಿಗೆ ಇರಿಸಿದನು.
Kannada BSI Bible 2016
ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯೆಹೋವನು ಆಜ್ಞಾಪಿಸಿದಂತೆ ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಮುಂದೆ ಇಟ್ಟು
Kannada Bible (KNCL) BSI 2016
ಸರ್ವೇಶ್ವರ ಆಜ್ಞಾಪಿಸಿದಂತೆ ಚಿನ್ನದ ಧೂಪವೇದಿಕೆಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಮುಂದೆ ಇಟ್ಟು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ಪರದೆಯ ಮುಂದೆ ಇಟ್ಟನು.