Exodus 40:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ದೇವದರ್ಶನಗುಡಾರವನ್ನು ಪ್ರವೇಶಿಸುವಾಗಲೆಲ್ಲಾ ಮತ್ತು ಯಜ್ಞವೇದಿಕೆಯ ಸಮೀಪ ಹೋಗುವಾಗಲೆಲ್ಲಾ ತಮ್ಮನ್ನು ತೊಳೆದುಕೊಳ್ಳುತ್ತಿದ್ದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಇದನ್ನು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ, ಯಜ್ಞವೇದಿಯ ಹತ್ತಿರ ಬರುವಾಗಲೂ ಯೆಹೋವನು ಆಜ್ಞಾಪಿಸಿದಂತೆ ಕೈಕಾಲುಗಳನ್ನು ತೊಳೆದುಕೊಳ್ಳುತ್ತಿದ್ದರು.
Kannada BSI Bible 2016
ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ ಯಜ್ಞವೇದಿಯ ಸೇವೆಗೆ ಬಂದಾಗಲೂ ಕೈಕಾಲುಗಳನ್ನು ತೊಳಕೊಳ್ಳುವರು.
Kannada Bible (KNCL) BSI 2016
ಆರೋನನೂ ಅವನ ಮಕ್ಕಳೂ ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ ಬಲಿಪೀಠದ ಸೇವೆಗೆ ಬಂದಾಗಲೂ ಕೈಕಾಲುಗಳನ್ನು ತೊಳೆದುಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದೇವದರ್ಶನದ ಗುಡಾರದ ಒಳಗೆ ಸೇರುವ ಸಮಯದಲ್ಲಿಯೂ, ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ಸ್ನಾನ ಮಾಡಿದರು.