Exodus 40:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಮೋಶೆಯು ಪವಿತ್ರಗುಡಾರದ ಅಂಗಳದ ಸುತ್ತಲೂ ಪರದೆಗಳನ್ನು ನಿಲ್ಲಿಸಿದನು. ಮೋಶೆಯು ವೇದಿಕೆಯನ್ನು ಅಂಗಳದಲ್ಲಿರಿಸಿದನು. ಬಳಿಕ ಅವನು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿಸಿದನು. ಹೀಗೆ ಮೋಶೆ ಯೆಹೋವನು ತನಗೆ ಕೊಟ್ಟ ಎಲ್ಲಾ ಕೆಲಸವನ್ನು ಮಾಡಿ ಮುಗಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ತೆರೆದು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಈ ಪ್ರಕಾರ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.
Kannada BSI Bible 2016
ಗುಡಾರಕ್ಕೂ ಯಜ್ಞವೇದಿಗೂ ಸುತ್ತಲೂ ಅಂಗಳ ವನ್ನು ನಿಲ್ಲಿಸಿ ಅಂಗಳದ ಬಾಗಿಲಿನ ತೆರೆಯನ್ನು ತೂಗು ಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.
Kannada Bible (KNCL) BSI 2016
ಗುಡಾರ ಹಾಗು ಬಲಿಪೀಠದ ಸುತ್ತಲು ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಗುಡಾರಕ್ಕೂ, ಬಲಿಪೀಠಕ್ಕೂ ಸುತ್ತಲೂ ಅಂಗಳವನ್ನು ನಿಲ್ಲಿಸಿ, ಅಂಗಳದ ಬಾಗಿಲಿನ ಪರದೆಯನ್ನು ತೂಗುಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.