Exodus 40:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅಭಿಷೇಕತೈಲವನ್ನು ಉಪಯೋಗಿಸಿ ಪವಿತ್ರಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಅಭಿಷೇಕಿಸು. ನೀನು ತೈಲವನ್ನು ಈ ವಸ್ತುಗಳ ಮೇಲೆ ಹಾಕುವಾಗ, ಅವುಗಳನ್ನು ಪವಿತ್ರಗೊಳಿಸುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು.
Kannada BSI Bible 2016
ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವದು.
Kannada Bible (KNCL) BSI 2016
ಬಳಿಕ ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿ ಇರುವುದೆಲ್ಲವನ್ನೂ ಅದರ ಎಲ್ಲ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಾಪಿಸು. ಅಂದಿನಿಂದ ಅದು ಪರಿಶುದ್ಧವಾಗಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ, ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ, ಅದರಲ್ಲಿರುವ ಎಲ್ಲಾ ಸಾಮಗ್ರಿಗಳನ್ನೂ ಪರಿಶುದ್ಧ ಮಾಡು. ಆಗ ಅದು ಪರಿಶುದ್ಧವಾಗುವುದು.