Exodus 5:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನಿಮ್ಮ ಕೆಲಸಕ್ಕೆ ಹೋಗಿರಿ! ನಾವು ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೆ ನೀವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕು” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಈಗ ಕೆಲಸಕ್ಕೆ ನಡೆಯಿರಿ ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೂ ನೇಮಿಸಿದ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಬೇಕು” ಅಂದನು.
Kannada BSI Bible 2016
ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಲಸಕ್ಕೆ ನಡೆಯಿರಿ, ನಿಮಗೆ ಹುಲ್ಲನ್ನು ಕೊಡಿಸುವದಿಲ್ಲ; ಆದರೂ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಬೇಕು ಅಂದನು.
Kannada Bible (KNCL) BSI 2016
ನಡೆಯಿರಿ ಕೆಲಸಕ್ಕೆ; ನಿಮಗೆ ಹುಲ್ಲು ಕೊಡುವುದಿಲ್ಲ; ಆದರೂ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಲೇಬೇಕು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಈಗ ಹೋಗಿ ಕೆಲಸಮಾಡಿರಿ. ಹುಲ್ಲನ್ನು ನಿಮಗೆ ಕೊಡುವುದಕ್ಕಾಗುವುದಿಲ್ಲ. ಆದರೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ತಯಾರಿಸಬೇಕು,” ಎಂದನು.