Exodus 5:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಫರೋಹನು, “ಯೆಹೋವನು ಯಾರು? ನಾನು ಆತನಿಗೆ ಯಾಕೆ ವಿಧೇಯನಾಗಬೇಕು. ಇಸ್ರೇಲರನ್ನು ನಾನು ಯಾಕೆ ಹೋಗಗೊಡಿಸಬೇಕು. ನೀವು ಯೆಹೋವನೆಂದು ಕರೆಯುವ ಆತನನ್ನು ನಾನು ಅರಿಯೆನು, ಆದ್ದರಿಂದ ಇಸ್ರೇಲರನ್ನು ಹೋಗಗೊಡಿಸುವುದಿಲ್ಲ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.
Kannada BSI Bible 2016
ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಫರೋಹನು - ಯೆಹೋವನೆಂಬವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲ್ಯರನ್ನು ಹೋಗಗೊಡಿಸುವದೇಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ ಇಸ್ರಾಯೇಲ್ಯರು ಹೊರಟುಹೋಗುವದಕ್ಕೆ ನಾನು ಒಪ್ಪುವದೇ ಇಲ್ಲ ಅಂದನು.
Kannada Bible (KNCL) BSI 2016
ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.