Exodus 5:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಮೋಶೆಯು ಯೆಹೋವನಿಗೆ ಪ್ರಾರ್ಥಿಸಿ, “ಯೆಹೋವನೇ, ನಿನ್ನ ಜನರಿಗೆ ಈ ಕೇಡನ್ನು ಏಕೆ ಮಾಡಿದೆ? ನನ್ನನ್ನು ಯಾಕೆ ಇಲ್ಲಿಗೆ ಕಳುಹಿಸಿದೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೋಶೆಯು ಯೆಹೋವನ ಬಳಿಗೆ ಹಿಂತಿರುಗಿ ಬಂದು, “ಸ್ವಾಮೀ, ಈ ಜನರಿಗೆ ಕೇಡನ್ನು ಮಾಡಿದ್ದೀಯಲ್ಲಾ? ನನ್ನನ್ನು ಕಳುಹಿಸಿದ್ದು ಯಾಕೆ?
Kannada BSI Bible 2016
ಆಗ ಮೋಶೆಯು ಕರ್ತನ ಬಳಿಗೆ ಬಂದು--ಕರ್ತನೇ, ಈ ಜನರಿಗೆ ಯಾಕೆ ಕೇಡನ್ನು ಮಾಡಿದಿ? ಯಾಕೆ ನನ್ನನ್ನು ಕಳುಹಿಸಿದಿ?ನಾನು ಫರೋಹನ ಬಳಿಗೆ ಬಂದು ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಈ ಜನರಿಗೆ ಅವನು ಕೇಡನ್ನೇ ಮಾಡುತ್ತಾನೆ. ನೀನು ನಿನ್ನ ಜನರನ್ನು ತಪ್ಪಿಸಲಿಲ್ಲವಲ್ಲಾ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮೋಶೆ ಯೆಹೋವನ ಬಳಿಗೆ ತಿರಿಗಿ ಬಂದು - ಸ್ವಾಮೀ, ಈ ಜನರಿಗೆ ಯಾಕೆ ಕೇಡನ್ನು ಮಾಡಿದಿ? ನನ್ನನ್ನು ಕಳುಹಿಸಿದ್ದು ಯಾಕೆ?
Kannada Bible (KNCL) BSI 2016
ಆಗ ಮೋಶೆ ಸರ್ವೇಶ್ವರನ ಸನ್ನಿಧಿಗೆ ಮತ್ತೆ ಬಂದು, “ಸ್ವಾಮೀ, ಈ ಜನರಿಗೆ ಹೀಗೇಕೆ ಮಾಡಿದಿರಿ? ನನ್ನನ್ನೇಕೆ ಇಲ್ಲಿಗೆ ಕಳಿಸಿದಿರಿ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ಯೆಹೋವ ದೇವರ ಬಳಿಗೆ ಬಂದು, “ಸ್ವಾಮಿ, ಈ ಜನರಿಗೆ ಏಕೆ ಕಷ್ಟವನ್ನು ಕೊಟ್ಟಿದ್ದೀರಿ? ಏಕೆ ನನ್ನನ್ನು ಕಳುಹಿಸಿದಿರಿ?