Exodus 5:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಫರೋಹನ ಬಳಿಗೆ ಹೋಗಿ ನೀನು ಹೇಳಿದ್ದನ್ನೇ ತಿಳಿಸಿದೆ. ಆದರೆ ಅಂದಿನಿಂದ ಅವನು ಜನರನ್ನು ಕೀಳಾಗಿ ಕಾಣುತ್ತಿದ್ದಾನೆ. ಅಲ್ಲದೆ ನೀನೂ ನಿನ್ನ ಜನರಿಗೆ ಸಹಾಯ ಮಾಡುತ್ತಿಲ್ಲ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಫರೋಹನ ಬಳಿಗೆ ಹೋಗಿ ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀನು ನಿನ್ನ ಜನರನ್ನು ಎಷ್ಟು ಮಾತ್ರವೂ ತಪ್ಪಿಸಲಿಲ್ಲವಲ್ಲ” ಎಂದು ಹೇಳಿದನು.
Kannada BSI Bible 2016
ನಾನು ಫರೋಹನ ಬಳಿಗೆ ಬಂದು ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಈ ಜನರಿಗೆ ಅವನು ಕೇಡನ್ನೇ ಮಾಡುತ್ತಾನೆ. ನೀನು ನಿನ್ನ ಜನರನ್ನು ತಪ್ಪಿಸಲಿಲ್ಲವಲ್ಲಾ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಫರೋಹನ ಬಳಿಗೆ ಹೋಗಿ ನಿನ್ನ ಹೆಸರಿನಲ್ಲಿ ಮಾತಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಾನಲ್ಲಾ; ನೀನು ನಿನ್ನ ಜನರನ್ನು ಎಷ್ಟು ಮಾತ್ರವೂ ತಪ್ಪಿಸಲೇ ಇಲ್ಲ ಅಂದನು.
Kannada Bible (KNCL) BSI 2016
ನಾನು ಫರೋಹನ ಬಳಿಗೆ ಹೋಗಿ ನಿಮ್ಮ ಹೆಸರಿನಲ್ಲಿ ಮಾತಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀವಾದರೋ ಅವರನ್ನು ಬಿಡುಗಡೆ ಮಾಡಲು ಏನನ್ನೂ ಮಾಡಿಲ್ಲ,” ಎಂದು ಮೊರೆಯಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಫರೋಹನ ಬಳಿಗೆ ಬಂದು ನಿಮ್ಮ ಹೆಸರಿನಲ್ಲಿ ಮಾತನಾಡಿದಂದಿನಿಂದ, ಈ ಜನರಿಗೆ ಅವನು ಕೇಡನ್ನೇ ಮಾಡುತ್ತಿದ್ದಾನೆ. ನೀವು ನಿಮ್ಮ ಜನರನ್ನು ರಕ್ಷಿಸಲಿಲ್ಲವಲ್ಲಾ,” ಎಂದನು.