Exodus 5:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಮೋಶೆ ಆರೋನರು, “ಇಬ್ರಿಯರ ದೇವರು ನಮ್ಮ ಸಂಗಡ ಮಾತಾಡಿದ್ದಾನೆ. ಆದ್ದರಿಂದ ನಾವು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವೆವು. ಇಲ್ಲವಾದರೆ ಆತನು ನಮ್ಮನ್ನು ಕಾಯಿಲೆಯಿಂದಲೋ ಕತ್ತಿಯಿಂದಲೋ ಸಂಹರಿಸುವನು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು, “ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು. ಅಪ್ಪಣೆಯಾದರೆ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಿ ಬರುವೆವು. ಇಲ್ಲವಾದರೆ ಆತನು ನಮ್ಮನ್ನು ವ್ಯಾಧಿಯಿಂದಾದರೂ, ಕತ್ತಿಯಿಂದಾದರೂ ಸಂಹಾರಮಾಡುವನು” ಎಂದು ಹೇಳಿದರು.
Kannada BSI Bible 2016
ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅವನಿಗೆ - ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು; ಅಪ್ಪಣೆಯಾದರೆ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞ ಮಾಡಿ ಬರುವೆವು; ಮಾಡದೆ ಹೋದರೆ ಆತನು ನಮ್ಮನ್ನು ವ್ಯಾಧಿಯಿಂದಲೋ ಕತ್ತಿಯಿಂದಲೋ ಸಂಹಾರಮಾಡಾನು ಎಂದು ಹೇಳಿದರು.
Kannada Bible (KNCL) BSI 2016
ಮೋಶೆ ಮತ್ತು ಆರೋನರು, “ಹಿಬ್ರಿಯರ ದೇವರು ನಮಗೆ ದರ್ಶನವಿತ್ತರು. ಅಪ್ಪಣೆ ಆದರೆ ನಾವು ಮರುಭೂಮಿಯಲ್ಲಿ ಮೂರು ದಿವಸದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸಿ ಬರುತ್ತೇವೆ. ಹಾಗೆ ಮಾಡದೆಹೋದರೆ ಅವರು ನಮ್ಮನ್ನು ವ್ಯಾಧಿಯಿಂದಲೋ ಕತ್ತಿಯಿಂದಲೋ ಸಂಹಾರ ಮಾಡುವರು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಫರೋಹನಿಗೆ, “ಹಿಬ್ರಿಯರ ದೇವರು ನಮ್ಮನ್ನು ಸಂದರ್ಶಿಸಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿವಸ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞ ಅರ್ಪಿಸುವುದಕ್ಕೆ ನಾವು ಹೋಗಬೇಕು. ಇಲ್ಲವಾದರೆ ಅವರು ಉಪದ್ರವದಿಂದಲೋ ಖಡ್ಗದಿಂದಲೋ ನಮ್ಮನ್ನು ದಂಡಿಸುವರು,” ಎಂದರು.