Exodus 5:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಈಜಿಪ್ಟಿನ ರಾಜನು ಅವರಿಗೆ, “ಮೋಶೆ ಆರೋನರೇ, ನೀವು ಕೆಲಸಗಾರರಿಗೆ ತೊಂದರೆ ಮಾಡುತ್ತಿದ್ದೀರಿ, ಅವರು ತಮ್ಮ ಕೆಲಸ ಮಾಡಲಿ! ನೀವು ನಿಮ್ಮ ಕೆಲಸವನ್ನು ಮಾಡಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತರ ಅರಸನು ಅವರಿಗೆ, “ಮೋಶೆ ಮತ್ತು ಆರೋನರೇ, ಈ ಜನರು ತಮ್ಮ ಕೆಲಸವನ್ನು ಮಾಡದಂತೆ ಯಾಕೆ ಅಡ್ಡಿ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಕ್ಕೆ ಹೋಗಿರಿ” ಎಂದು ಹೇಳಿದನು.
Kannada BSI Bible 2016
ಐಗುಪ್ತದ ಅರಸನು ಅವರಿಗೆ--ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸ ಗಳನ್ನು ಮಾಡದಂತೆ ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಗಳಿಗೆ ಹೋಗಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತ್ಯರ ಅರಸನು ಅವರಿಗೆ - ಮೋಶೆಯೇ, ಆರೋನನೇ, ಈ ಜನರು ತಮ್ಮ ಕೆಲಸವನ್ನು ಬಿಡುವಂತೆ ನೀವು ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಕ್ಕೆ ನಡೆಯಿರಿ ಎಂದು ಹೇಳಿದನು.
Kannada Bible (KNCL) BSI 2016
ಅವರಿಗೆ ಆ ಈಜಿಪ್ಟರ ಅರಸನು, “ಎಲೈ ಮೋಶೆ - ಆರೋನರೇ, ನೀವು ಮಾಡುತ್ತಾ ಇರುವುದೇನು? ಈ ಜನರು ತಮ್ಮ ಕೆಲಸವನ್ನು ಬಿಡುವಂತೆ ಮಾಡುತ್ತಿದ್ದೀರಿ. ನಡೆಯಿರಿ ಗುಲಾಮಗಿರಿಗೆ” ಎಂದುಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿನ ಅರಸನು ಅವರಿಗೆ, “ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸಗಳನ್ನು ಮಾಡದಂತೆ ಏಕೆ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಗಳಿಗೆ ಹೋಗಿ,” ಎಂದನು.