Exodus 5:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೂ ಅವರು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಈಗಲೂ ಮಾಡಬೇಕು. ಅವರು ಸೋಮಾರಿಗಳಾಗಿದ್ದಾರೆ. ಆದಕಾರಣ ತಮ್ಮನ್ನು ಹೋಗಬಿಡಬೇಕೆಂದು ಕೇಳುತ್ತಿದ್ದಾರೆ. ಅವರಿಗೆ ಸಾಕಷ್ಟು ಕೆಲಸವಿಲ್ಲ. ಆದ್ದರಿಂದ ತಮ್ಮ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಹೋಗಗೊಡಿಸಬೇಕೆಂದು ಕೇಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆಯಾಗಬಾರದು ಎಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದುದರಿಂದಲೇ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೂಗಿಕೊಳ್ಳುತ್ತಿದ್ದಾರೆ.
Kannada BSI Bible 2016
ಅವರು ಈ ವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ; ಆದದರಿಂದ ಅವರು--ನಾವು ಹೋಗಿ ನಮ್ಮ ದೇವರಿಗೆ ಬಲಿ ಅರ್ಪಿಸೋಣ ಎಂದು ಕೂಗುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕವನ್ನು ಮುಂದೆಯೂ ಒಪ್ಪಿಸಬೇಕು; ಅದನ್ನು ಕಡಿಮೆಮಾಡಕೂಡದು. ಅವರು ಮೈಗಳ್ಳರಾದದರಿಂದ - ನಾವು ಹೋಗಿ ನಮ್ಮ ದೇವರಿಗೆ ಯಜ್ಞವನ್ನು ಮಾಡಿ ಬರುವದಕ್ಕೆ ಅಪ್ಪಣೆಯಾಗಬೇಕೆಂದು ಕೂಗಿಕೊಳ್ಳುತ್ತಾರೆ.
Kannada Bible (KNCL) BSI 2016
ಆದರೆ ಇಟ್ಟಿಗೆಗಳ ಲೆಕ್ಕವನ್ನು ಎಂದಿನಂತೆ ಒಪ್ಪಿಸಲಿ.ಅದನ್ನು ಕಡಿಮೆ ಮಾಡಕೂಡದು. ಇವರು ಮೈಗಳ್ಳರು. ಆದ್ದರಿಂದಲೇ, ‘ನಾವು ಹೋಗಿ ನಮ್ಮ ದೇವರಿಗೆ ಬಲಿಯರ್ಪಿಸಿ ಬರುವುದಕ್ಕೆ ಅಪ್ಪಣೆಯಾಗಬೇಕು,’ ಎಂದು ಬೊಬ್ಬೆಹಾಕುತ್ತಾ ಇದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದ್ದರಿಂದ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞವನ್ನು ಅರ್ಪಿಸೋಣ,’ ಎಂದು ಕೂಗುತ್ತಾರೆ.