Exodus 6:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಮೋಶೆ, “ಇಸ್ರೇಲರು ನನ್ನ ಮಾತನ್ನು ಕೇಳುವುದಿಲ್ಲ! ಆದ್ದರಿಂದ ಫರೋಹನು ನನ್ನ ಮಾತನ್ನು ಖಂಡಿತವಾಗಿ ಕೇಳುವುದಿಲ್ಲ. ನಾನು ಮಾತಾಡುವುದರಲ್ಲಿ ಜಾಣನಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತುಗಳನ್ನು ಕೇಳುತ್ತಿಲ್ಲ; ಹೀಗಿರುವಾಗ ತೊದಲು ಮಾತನಾಡುವ ನನ್ನ ಮಾತುಗಳಿಗೆ ಫರೋಹನು ಕಿವಿಗೊಟ್ಟಾನೇ?” ಅಂದನು.
Kannada BSI Bible 2016
ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ--ಇಗೋ, ಇಸ್ರಾಯೇಲ್‌ ಮಕ್ಕಳೇ ನನ್ನ ಮಾತನ್ನು ಕೇಳದಿರುವಲ್ಲಿ ತೊದಲು ನಾಲಿಗೆಯವನಾದ ನನ್ನ ಮಾತನ್ನು ಫರೋಹನು ಕೇಳುವದು ಹೇಗೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ - ಇಗೋ, ಇಸ್ರಾಯೇಲ್ಯರೇ ನನ್ನ ಮಾತನ್ನು ಕೇಳಲಿಲ್ಲ. ಫರೋಹನು ಕಿವಿಗೊಟ್ಟಾನೇ? ನಾನು ಮಾತಾಡುವದರಲ್ಲಿ ಜಾಣನಲ್ಲ ಅಂದನು.
Kannada Bible (KNCL) BSI 2016
ಅದಕ್ಕೆ ಮೋಶೆ ಸರ್ವೇಶ್ವರನ ಸನ್ನಿಧಿಯಲ್ಲಿ, “ಆಲಿಸಬೇಕು, ಇಸ್ರಯೇಲರೇ ನನ್ನ ಮಾತನ್ನು ಕೇಳಲಿಲ್ಲ; ಇನ್ನು ಫರೋಹನು ಕಿವಿಗೊಟ್ಟಾನೆ? ನನಗಾದರೂ ಚುರುಕಾದ ನಾಲಿಗೆಯಿಲ್ಲ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮೋಶೆಯು ಯೆಹೋವ ದೇವರ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತನ್ನು ಕೇಳದಿರುವಲ್ಲಿ, ತೊದಲು ಮಾತನಾಡುವ ನನ್ನ ಮಾತನ್ನು ಫರೋಹನು ಕೇಳುವುದು ಹೇಗೆ?” ಎಂದನು.