Exodus 6:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ, ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಇಸ್ರೇಲರೊಡನೆಯೂ ಫರೋಹನೊಡನೆಯೂ ಮಾತಾಡಬೇಕೆಂದು ಆಜ್ಞಾಪಿಸಿದನು. ಅಲ್ಲದೆ ಈಜಿಪ್ಟಿನಿಂದ ಇಸ್ರೇಲರನ್ನು ಬಿಡಿಸಿಕೊಂಡು ಹೋಗಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲರ ಬಳಿಗೂ ಐಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು.
Kannada BSI Bible 2016
ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಇಸ್ರಾಯೇಲ್‌ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾ ಯೇಲ್ಯರ ಬಳಿಗೂ ಫರೋಹನ ಬಳಿಗೂ ಹೋಗ ಬೇಕೆಂದು ಹೇಳಿ ಅವರಿಗೆ ಆಜ್ಞಾಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆ ಆರೋನರ ಸಂಗಡ ಮಾತಾಡಿ ಇಸ್ರಾಯೇಲ್ಯರನ್ನು ಐಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲ್ಯರ ಬಳಿಗೂ ಐಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು.
Kannada Bible (KNCL) BSI 2016
ಸರ್ವೇಶ್ವರ ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಯೇಲರ ಬಳಿಗೂ ಅರಸ ಫರೋಹನ ಬಳಿಗೂ ಕಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಈಜಿಪ್ಟಿನ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾಯೇಲರ ಬಳಿಗೂ ಅರಸನಾದ ಫರೋಹನ ಬಳಿಗೂ ಹೋಗಬೇಕೆಂದು ಅವರಿಗೆ ಆಜ್ಞಾಪಿಸಿದರು.