Exodus 6:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಗಳನ್ನು ಮದುವೆಯಾದನು; ಆಕೆ ಫೀನೆಹಾಸನಿಗೆ ಜನ್ಮವಿತ್ತಳು. ಇವರೆಲ್ಲರೂ ಇಸ್ರೇಲನ ಮಗನಾದ ಲೇವಿಯ ಗೋತ್ರದವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಪ್ರಕಾರ ಇವರೇ ಲೇವಿಯರ ಪೂರ್ವಿಕರು.
Kannada BSI Bible 2016
ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳೊಳಗೆ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಮೇರೆಗೆ ಇವರೇ ಲೇವಿಯರ ಪೂರ್ವಿಕರು.
Kannada Bible (KNCL) BSI 2016
ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆಮಾಡಿಕೊಂಡನು. ಆಕೆ ಅವನಿಗೆ ಫಿನೇಹಾಸನನ್ನು ಹೆತ್ತಳು. ಅವರವರ ಗೋತ್ರದ ಮೇರೆಗೆ ಇವರೇ ಲೇವಿಯರ ಪೂರ್ವಿಕರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನ ಮಗ ಎಲಿಯಾಜರನು ಪೂಟಿಯೇಲನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಯಾದನು. ಆಕೆಯು ಅವನಿಗೆ ಫೀನೆಹಾಸನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿಯರ ಗೋತ್ರಗಳ ಮುಖ್ಯಸ್ಥರು.