Exodus 6:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆ ಆರೋನರು ಸಹ ಲೇವಿ ಕುಲದವರು. “ನನ್ನ ಜನರನ್ನು ಗುಂಪುಗುಂಪಾಗಿ ಈಜಿಪ್ಟಿನಿಂದ ನಡೆಸಿಕೊಂಡು ಹೋಗಿ” ಎಂದು ದೇವರು ಹೇಳಿದ್ದು ಇವರಿಗೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರನ್ನು ಅವರ ಗೋತ್ರಗಳಿಗನುಸಾರವಾಗಿ, ಐಗುಪ್ತದೇಶದಿಂದ ಹೊರಗೆ ಬರಮಾಡಬೇಕೆಂದು ಯೆಹೋವನು ಯಾರಿಗೆ ಹೇಳಿದನೋ ಅವರೇ ಆರೋನ್ ಮತ್ತು ಮೋಶೆ.
Kannada BSI Bible 2016
ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಸೈನ್ಯವನ್ನೆಲ್ಲಾ ಐಗುಪ್ತ ದೇಶದಿಂದ ನಡಿಸಿಕೊಂಡು ಬರುವದಕ್ಕೆ ಯೆಹೋವನಿಂದ ಆಜ್ಞೆಹೊಂದಿದ ಆರೋನ ಮೋಶೆಯರು ಇವರೇ.
Kannada Bible (KNCL) BSI 2016
“ತಮ್ಮ ತಮ್ಮ ಗೋತ್ರದ ಪ್ರಕಾರ ಇಸ್ರಯೇಲ್ ಜನರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬರುವುದಕ್ಕೆ ಸರ್ವೇಶ್ವರನಿಂದ ಆಜ್ಞೆಹೊಂದಿದ ಆರೋನ್ ಮತ್ತು ಮೋಶೆ ಇವರೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನ್, ಮೋಶೆ ಇವರಿಗೆ, “ಇಸ್ರಾಯೇಲರನ್ನು ಅವರವರ ಗೋತ್ರಗಳಿಗನುಸಾರವಾಗಿ ಈಜಿಪ್ಟಿನ ಒಳಗಿಂದ ಹೊರಗೆ ಬರಮಾಡಬೇಕು,” ಎಂದು ಯೆಹೋವ ದೇವರು ಹೇಳಿದ್ದರು.