Exodus 6:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.
Kannada BSI Bible 2016
ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮನ್ನು ನನ್ನ ಪ್ರಜೆಯೆಂದು ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನು ಎಂಬ ನಾನೇ ನಿಮ್ಮ ದೇವರಾಗಿದ್ದೇನೆಂಬದು ನಿಮಗೆ ತಿಳಿದುಬರುವದು.
Kannada Bible (KNCL) BSI 2016
ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.