Exodus 6:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು.
Kannada BSI Bible 2016
ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅಬ್ರಹಾಮ ಇಸಾಕ ಯಾಕೋಬರಿಗೆ ಕೊಡುವೆನೆಂದು ನಾನು ಪ್ರಮಾಣವಾಗಿ ಹೇಳಿದ ದೇಶಕ್ಕೆ ನಿಮ್ಮನ್ನು ಸೇರಿಸಿ ಅದನ್ನು ನಿಮಗೆ ಸ್ವದೇಶವನ್ನಾಗಿ ಕೊಡುವೆನು; ಯೆಹೋವನೇ ನಾನು; ಹೀಗೆ ಅವರಿಗೆ ಹೇಳು ಅಂದನು.
Kannada Bible (KNCL) BSI 2016
ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕೊಡುವೆನೆಂದು ಕೈಯನ್ನೆತ್ತಿ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸೊತ್ತಾಗಿ ಕೊಡುವೆನೆಂದು ಹೇಳಿದ ಯೆಹೋವ ದೇವರು ನಾನೇ,’ ಎಂದು ಹೇಳು,” ಎಂದರು.