Exodus 7:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋದರು. ಯೆಹೋವನು ಆಜ್ಞಾಪಿಸಿದ್ದಂತೆಯೇ ಅವರು ಮಾಡಿದರು. ಆರೋನನು ತನ್ನ ಊರುಗೋಲನ್ನು ಫರೋಹನ ಮತ್ತು ಅವನ ಅಧಿಕಾರಿಗಳ ಮುಂದೆ ನೆಲದ ಮೇಲೆ ಬಿಸಾಡಿದಾಗ ಅದು ಸರ್ಪವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಹಾಕಿದಾಗ ಅದು ಸರ್ಪವಾಯಿತು.
Kannada BSI Bible 2016
ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಯೆಹೋವನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಬೀಸಾಡಿದಾಗ ಅದು ಸರ್ಪವಾಯಿತು.
Kannada Bible (KNCL) BSI 2016
ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋದರು. ಸರ್ವೇಶ್ವರ ತಮಗೆ ಹೇಳಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಬಿಸಾಡಿದಾಗ ಅದು ಸರ್ಪ ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯೂ ಆರೋನನೂ ಫರೋಹನ ಬಳಿಗೆ ಹೋಗಿ ಯೆಹೋವ ದೇವರು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹ ಮತ್ತು ಅವನ ಸೇವಕರ ಮುಂದೆಯೂ ಬಿಸಾಡಿದಾಗ, ಅದು ಸರ್ಪವಾಯಿತು.