Exodus 7:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋವನು ಮೋಶೆಗೆ, “ಫರೋಹನ ಹೃದಯ ಮೊಂಡಾಗಿದೆ; ಅವನು ಜನರನ್ನು ಹೋಗಗೊಡಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಮೋಶೆಗೆ, “ಫರೋಹನ ಹೃದಯವು ಕಠಿಣವಾಗಿದೆ, ತಾನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡುವುದಿಲ್ಲ ಎನ್ನುತ್ತಾನೆ.
Kannada BSI Bible 2016
ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಯೆಹೋವನು ಮೋಶೆಗೆ - ಫರೋಹನ ಹೃದಯವು ಮೊಂಡಾಗಿದೆ; ತಾನು ಜನರಿಗೆ ಅಪ್ಪಣೆ ಕೊಡುವದಿಲ್ಲವೆನ್ನುತ್ತಾನೆ.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು: “ಫರೋಹನ ಹೃದಯ ಮೊಂಡಾಗಿದೆ. ಜನರು ಹೋಗಲು ಅಪ್ಪಣೆ ಕೊಡುವುದಿಲ್ಲವೆನ್ನುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಮೋಶೆಗೆ, “ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವುದಕ್ಕೆ ನಿರಾಕರಿಸುತ್ತಿದ್ದಾನೆ.