Exodus 7:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ. ಆತನ ಜನರು ಅರಣ್ಯದಲ್ಲಿ ಆತನನ್ನು ಆರಾಧಿಸುವುದಕ್ಕೆ ನೀನು ಅವರಿಗೆ ಅಪ್ಪಣೆಕೊಡಬೇಕೆಂದು ಆತನು ನಿನಗೆ ಆಜ್ಞಾಪಿಸುತ್ತಾನೆ. ಇದುವರೆಗೆ ನೀನು ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ, ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದ್ದಾನಷ್ಟೇ. ಈ ವರೆಗೂ ನೀನು ಅದನ್ನು ಲಕ್ಷ್ಯಕ್ಕೆ ತರಲಿಲ್ಲ.
Kannada BSI Bible 2016
ಅವನಿಗೆ ನೀನು--ಇಬ್ರಿಯರ ದೇವರಾದ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು ಎಂದು ಹೇಳಿದ್ದಾನೆ. ಆದರೆ ಇಗೋ, ಇಂದಿನ ವರೆಗೂ ನೀನು ಕೇಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದನಷ್ಟೆ; ಈವರೆಗೂ ನೀನು ಲಕ್ಷ್ಯಕ್ಕೆ ತರಲಿಲ್ಲ.
Kannada Bible (KNCL) BSI 2016
ಅವನಿಗೆ “ಹಿಬ್ರಿಯರ ದೇವರಾದ ಸರ್ವೇಶ್ವರ ನನ್ನನ್ನು ನಿನ್ನ ಬಳಿಗೆ ಕಳಿಸಿದ್ದಾರೆ. ಅವರು ನಿನಗೆ ಹೇಳುವ ಮಾತಿದು: ಮರುಭೂಮಿಯಲ್ಲಿ ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆ ಕೊಡಬೇಕೆಂದು ನಿನಗೆ ಆಜ್ಞಾಪಿಸಿದೆ. ಆದರೆ ನೀನು ಈವರೆಗೂ ಅದನ್ನು ಲಕ್ಷ್ಯಕ್ಕೆ ತಂದುಕೊಂಡಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನಿಗೆ ನೀನು, ‘ಹಿಬ್ರಿಯರ ದೇವರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ಮರುಭೂಮಿಯಲ್ಲಿ ನನಗೆ ಆರಾಧನೆ ಮಾಡುವ ಹಾಗೆ ನನ್ನ ಜನರನ್ನು ಕಳುಹಿಸು, ಎಂದು ಅವರು ಹೇಳಿದ್ದಾರೆ. ಆದರೆ ಇಗೋ, ಇಂದಿನವರೆಗೂ ನೀನು ಕೇಳಲಿಲ್ಲ.