Exodus 7:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಆರೋನನಿಗೆ ಹೇಳು. ಆಗ ಅವನು ಅವುಗಳನ್ನೆಲ್ಲಾ ರಾಜನಿಗೆ ತಿಳಿಸುವನು. ಇಸ್ರೇಲರು ಈ ದೇಶವನ್ನು ಬಿಟ್ಟು ಹೋಗುವುದಕ್ಕೆ ಫರೋಹನು ಸಮ್ಮತಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿನಗೆ ಆಜ್ಞಾಪಿಸುವುದ್ದನ್ನೆಲ್ಲಾ ನೀನು ಹೇಳಬೇಕು. ಇಸ್ರಾಯೇಲರು ದೇಶದಿಂದ ಹೊರಟುಹೋಗುವುದಕ್ಕೆ ಅಪ್ಪಣೆಕೊಡಬೇಕೆಂಬುದಾಗಿ ನಿನ್ನ ಅಣ್ಣನಾದ ಆರೋನನೇ ಫರೋಹನ ಮುಂದೆ ಮಾತನಾಡಬೇಕು.
Kannada BSI Bible 2016
ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್‌ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಅಣ್ಣನಾದ ಆರೋನನು ನಿನಗೋಸ್ಕರ ಪ್ರವಾದಿಯಾಗಿರುವನು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಹೇಳಬೇಕು. ಇಸ್ರಾಯೇಲ್ಯರು ದೇಶದಿಂದ ಹೊರಟುಹೋಗುವದಕ್ಕೆ ಅಪ್ಪಣೆಕೊಡಬೇಕೆಂಬದಾಗಿ ನಿನ್ನ ಅಣ್ಣನಾದ ಆರೋನನೇ ಫರೋಹನ ಮುಂದೆ ಮಾತಾಡಬೇಕು.
Kannada Bible (KNCL) BSI 2016
ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ನೀನು ಹೇಳಬೇಕು. ಇಸ್ರಯೇಲರು ಈ ದೇಶದಿಂದ ಹೊರಟುಹೋಗುವುದಕ್ಕೆ ಅಪ್ಪಣೆಕೊಡಬೇಕೆಂದು ನಿನ್ನ ಅಣ್ಣ ಆರೋನನೇ ಫರೋಹನ ಮುಂದೆ ಮಾತಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ನೀನು ಮಾತನಾಡಬೇಕು. ಇಸ್ರಾಯೇಲರನ್ನು ತನ್ನ ದೇಶದೊಳಗಿಂದ ಕಳುಹಿಸಿಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.