Exodus 7:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಆರೋನರು ಮಾಡಿದರು. ಆರೋನನು ಫರೋಹನ ಮತ್ತು ಅವನ ಅಧಿಕಾರಿಗಳ ಮುಂದೆ ಕೋಲನ್ನು ಎತ್ತಿ ನೈಲ್ ನದಿಯ ನೀರನ್ನು ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಮತ್ತು ಆರೋನರು ಯೆಹೋವನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ಫರೋಹನ ಮತ್ತು ಅವನ ಪರಿವಾರದ ಮುಂದೆ ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯಲು ಅದೆಲ್ಲಾ ರಕ್ತವಾಯಿತು.
Kannada BSI Bible 2016
ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆರೋನರು ಯೆಹೋವನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ಫರೋಹನ ಮತ್ತು ಅವನ ಪರಿವಾರದ ಮುಂದೆ ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಹೊಡೆಯಲು ಅದೆಲ್ಲಾ ರಕ್ತವಾಯಿತು.
Kannada Bible (KNCL) BSI 2016
ಮೋಶೆ ಮತ್ತು ಆರೋನರು ಸರ್ವೇಶ್ವರ ಸ್ವಾಮಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಫರೋಹನ ಹಾಗು ಅವನ ಪರಿವಾರದ ಮುಂದೆ ಆರೋನನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಹೊಡೆದನು. ಅದೆಲ್ಲ ರಕ್ತಮಯ ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯೂ ಆರೋನನೂ ಯೆಹೋವ ದೇವರು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಫರೋಹನ ಮುಂದೆಯೂ, ಅವನ ಸೇವಕರ ಮುಂದೆಯೂ ಹೊಡೆದನು. ಆಗ ನದಿಯಲ್ಲಿದ್ದ ನೀರೆಲ್ಲಾ ರಕ್ತವಾಯಿತು.