Exodus 7:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಐಗುಪ್ತ್ಯ ದೇಶದ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಇನ್ನೂ ಕಠಿಣವಾಯಿತು. ಯೆಹೋವನು ಹೇಳಿದಂತೆಯೇ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆ ಹೋದನು.
Kannada BSI Bible 2016
ಐಗುಪ್ತದ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಕರ್ತನು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಐಗುಪ್ತದೇಶದ ಜೋಯಿಸರು ತಮ್ಮ ಗುಪ್ತವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಯೆಹೋವನು ಹೇಳಿದ್ದಂತೆಯೇ ಅವನು ಮೋಶೆ ಆರೋನರ ಮಾತನ್ನು ಕೇಳದೆ ಹೋದನು.
Kannada Bible (KNCL) BSI 2016
ಆದರೆ ಈಜಿಪ್ಟ್ ದೇಶದ ಮಾಟಗಾರರು ಕೂಡ ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನ ಹೃದಯ ಕಠಿಣವಾಯಿತು. ಸರ್ವೇಶ್ವರ ಈ ಮೊದಲೇ ತಿಳಿಸಿದ್ದಂತೆ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈಜಿಪ್ಟಿನ ಮಂತ್ರಗಾರರು ತಮ್ಮ ಮಾಟಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಯೆಹೋವ ದೇವರು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.