Exodus 7:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಾನು ಈಜಿಪ್ಟನ್ನು ಭಯಂಕರವಾಗಿ ದಂಡಿಸಿ ನನ್ನ ಜನರನ್ನು ಆ ದೇಶದಿಂದ ಹೊರತರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ, ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ, ನನ್ನ ಜನರಾಗಿರುವ ಇಸ್ರಾಯೇಲರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರತರುವೆನು.
Kannada BSI Bible 2016
ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನನ್ನ ಜನರಾಗಿರುವ ಇಸ್ರಾಯೇಲ್ಯರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರ ತರುವೆನು.
Kannada Bible (KNCL) BSI 2016
ಫರೋಹನು ನಿನ್ನ ಮಾತನ್ನು ಕೇಳುವುದಿಲ್ಲ. ಆಗ ನಾನು ಈಜಿಪ್ಟ್ ದೇಶದವರನ್ನು ಬಾಧಿಸಿ ಅವರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸುವೆನು. ನನ್ನ ಜನರಾದ ಇಸ್ರಯೇಲರ ಗೋತ್ರಗಳನ್ನೆಲ್ಲ ಈಜಿಪ್ಟ್ ದೇಶದಿಂದ ಹೊರತರುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆದರೆ ನನ್ನ ಕೈಯನ್ನು ಈಜಿಪ್ಟಿನ ಮೇಲೆ ಇಟ್ಟು, ದೊಡ್ಡ ನ್ಯಾಯ ತೀರ್ಪುಗಳಿಂದ ನನ್ನ ಜನರಾದ ಇಸ್ರಾಯೇಲರನ್ನೂ, ಅವರ ಸೈನ್ಯಗಳನ್ನೂ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡುವೆನು.